ಡೈರಿ ಎಫೆಕ್ಟ್: ಸ್ಟೀಲ್ ಫ್ಲೈ ಓವರ್ ಯೋಜನೆಗೆ ತಿಲಾಂಜಲಿ

0
274

ವಿವಾದಿತ ಸ್ಟೀಲ್‍ ಬ್ರಿಡ್ಜ್ ನಿರ್ಮಾಣ ಯೋಜನೆಯನ್ನು ಕೈಬಿಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ.

ಕಪ್ಪ ಡೈರಿಯ ವಿಚಾರವಾಗಿ ಆರೋಪ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡಲು ಸಿದ್ದು ಮಾಸ್ಟರ್‍ಪ್ಲಾನ್ ಮಾಡಿದ್ದು, ಅಚ್ಚರಿಯ ತೀರ್ಮಾನ ಪ್ರಕಟಿಸಲು ಸಜ್ಜಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗಿದೆ.

ಸ್ಟೀಲ್ ಬ್ರಿಡ್ಜ್ ಸಂಬಂಧ ಸಿಎಂ ಸಿದ್ದರಾಮಯ್ಯಗೆ 65 ಕೋಟಿ ರೂ. ಕಿಕ್‍ಬ್ಯಾಕ್ ಹೋಗಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ರು. ಗೋವಿಂದರಾಜು ಡೈರಿಯಲ್ಲಿ 65 ಕೋಟಿ ರೂ. ಕಪ್ಪದ ಬಗ್ಗೆ ಬರವಣಿಗೆ ಸಾಕ್ಷಿ ಇದೆ ಅಂತಾ ಬಿಎಸ್‍ವೈ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಸಿಲುಕ್ಕಿದ್ದ ಸಿಎಂ ಸಿದ್ದರಾಮಯ್ಯ ಆಂಡ್ ಟೀಂ ಸ್ಟೀಲ್‍ ಬ್ರಿಡ್ಜ್ ನಿರ್ಮಾಣವನ್ನೇ ಕೈಬಿಡಲು ತೀರ್ಮಾನ ಮಾಡಿದ್ದು, ಆರೋಪ ಮಾಡಿದ್ದ ಬಿಜೆಪಿಗೆ ಟಾಂಗ್ ಕೊಡಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

 Click this button or press Ctrl+G to toggle between Kannada and English