ಪಾರ್ವತಮ್ಮರಾಜ್‌ಕುಮಾರ್‌ ಆರೋಗ್ಯದಲ್ಲಿ ಸುಧಾರಣೆ

0
194

ನಟ ಡಾ.ರಾಜ್‌ಕುಮಾರ್‌ ಅವರ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್‌ ಅವರು ಅಸ್ವಸ್ಥರಾಗಿ ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು  ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

‘ತಾಯಿಯ ಆರೋಗ್ಯ ಈಗ ಚೇತರಿಸಿಕೊಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ’ ಎಂದು ನಟ ಶಿವರಾಜಕುಮಾರ್‌ ಹೇಳಿದ್ದಾರೆ.

ಮಂಗಳವಾರ ಮಧ್ಯರಾತ್ರಿ ರಕ್ತದೊತ್ತಡ ಕಡಿಮೆಯಾಗಿ, ಮಧುಮೇಹ ಹೆಚ್ಚಾಗಿದ್ದರಿಂದ ಅಸ್ವಸ್ಥರಾಗಿದ್ದ ಪಾರ್ವತಮ್ಮ ರಾಜ್‌ಕುಮಾರ್‌ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ  ಪಾರ್ವತಮ್ಮ ರಾಜ್‌ಕುಮಾರ್‌ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

 Click this button or press Ctrl+G to toggle between Kannada and English