ಕೇಂದ್ರ ಪರಿಸರ ಖಾತೆ ಸಚಿವ ಅನಿಲ್ ಮಹದೇವ್ ದವೆ(60) ನಿಧನರಾಗಿದ್ದಾರೆ….

0
200

ಕೇಂದ್ರ ಪರಿಸರ ಖಾತೆ ಸಚಿವ ಅನಿಲ್ ಮಹದೇವ್ ದವೆ(60) ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ದವೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.ಅನಿಲ್ ದವೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತ ಪಡಿಸಿದ್ದಾರೆ, ಅನಿಲ್ ದವೆ ಅವರ ನಿಧನದಿಂದ ನನಗೆ ವಯಕ್ತಿಕ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ, ನಿನ್ನೆ ಸಂಜೆಯವರೆಗೂ ನಾನು ಅವರ ಜೊತೆಗೆ ಇದ್ದೆ, ಆದರೆ ಅವರು ಈಗ ಇಲ್ಲ ಎಂದು ಆಘಾತ ವ್ಯಕ್ತ ಪಡಿಸಿದ್ದಾರೆ.ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಒಲವು ಹೊಂದಿದ್ದ ಅನಿಲ್ ದವೆ ಜನಸೇವೆಯನ್ನೇ ಕಾಯಕವನ್ನಾಗಿಸಿಕೊಂಡಿದ್ದರು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.ಆರ್ ಎಸ್ ಎಸ್ ನಲ್ಲಿ ಸಕ್ರಿಯರಾಗಿದ್ದ ಅನಿಲ್ ದವೆ ಅವರು ಕಳೆದ ವರ್ಷ ಪರಿಸರ ಸತಿವರಾಗಿ ಅಧಿಕಾರ ಸ್ವೀಕರಿಸಿದ್ದರು, ಮಧ್ಯಪ್ರದೇಶದಿಂದ ರಾಜ್ಯ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.

 Click this button or press Ctrl+G to toggle between Kannada and English