ಜಿಎಸ್​ಟಿ: ಜೂನ್ 30ರಂದು ಮಧ್ಯರಾತ್ರಿ ಅಧಿವೇಶನ

0
204

ನವದೆಹಲಿ: ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ ಜಾರಿ ಕುರಿತು ಜೂನ್ 30ರಂದು ಸಂಸತ್ತಿನ ವಿಶೇಷ ಅಧಿವೇಶನ ನಡೆಸಲಾಗುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಇನ್ನು ವಿಶೇಷ ಅಧಿವೇಶನದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೂಡ ಅವರು ತಿಳಿಸಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸುಧಾರಣಾ ಕ್ರಮವಾದ ಸರಕು ಮತ್ತು ಸೇವಾ ತೆರಿಗೆ ಜಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹತ್ವದ ಪಾತ್ರ ನಿರ್ವಹಿಸಲಿವೆ ಎಂದು ಅವರು ಅಭಿಪ್ರಾಯಪಟ್ಟರು.

 Click this button or press Ctrl+G to toggle between Kannada and English