ಗಂಭೀರ್ ಮನೆಗೆ ಹೊಸ ಅತಿಥಿ…

0
169

ಟೀಂ ಇಂಡಿಯಾ ಕ್ರಿಕೆಟಿಗ ಗೌತಮ್ ಗಂಭೀರ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಗೌತಮ್ ಗಂಭೀರ್ ಮತ್ತೊಮ್ಮೆ ತಂದೆಯಾಗಿದ್ದಾರೆ. ಗೌತಮ್ ಪತ್ನಿ ನತಾಶಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರೂ ಗೌತಮ್ ಗಂಭೀರ್ ಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಅವಕಾಶ ಸಿಗಲಿಲ್ಲ. ಅನೇಕ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಗಂಭೀರ್ ಈಗ ಖುಷಿಯಾಗಿದ್ದಾರೆ. ಮನೆಗೆ ಬಂದ ಮಹಾಲಕ್ಷ್ಮಿಯನ್ನು ಮುದ್ದಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗೌತಮ್ ಗಂಭೀರ್ ಈ ಖುಷಿ ವಿಷಯವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದು, ಹಿರಿ ಮಗಳು ತನ್ನ ತಂಗಿಯನ್ನು ತೊಡೆ ಮೇಲೆ ಮಲಗಿಸಿಕೊಂಡಿರುವ ಫೋಟೋವನ್ನು ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

 Click this button or press Ctrl+G to toggle between Kannada and English