ನ.19ರಂದು ರಾಜ್ಯಕ್ಕೆ ರಾಹುಲ್​ಗಾಂಧಿ ಆಗಮನ ಹಿನ್ನೆಲೆ..

0
134

ಇಂದಿರಾಗಾಂಧಿ ಜನ್ಮ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕೆಪಿಸಿಸಿ ಆಯೋಜಿಸಿರೋ ಕಾರ್ಯಕ್ರಮಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೀತು. ಜನಸಾಮಾನ್ಯರ ಮನಸಲ್ಲಿ ಉಳಿಯುವಂತಹ ಯೋಜನೆ ರೂಪಿಸಿ ಸರ್ಕಾರಕ್ಕೆ ನೀಡಲು ಕೆಪಿಸಿಸಿ ಚಿಂತನೆ ನಡೆಸಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ಕಾರ್ಯಕ್ರಮ ಕಡೆಗೂ ಅಂತಿಮಗೊಂಡಿದೆ. ನವೆಂಬರ್ 19ರಿಂದ ಮೂರು ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ನಡುವೆ ಕೆಪಿಸಿಸಿ ಆಯೋಜಿಸಿರೋ ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯವರ ಕಾರ್ಯಕ್ರಮ ಆಯೋಜನೆ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯ್ತು. ಅಧ್ಯಕ್ಷ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ಶಾಸಕ ಸಚಿವರು ಭಾಗವಹಿಸಿದ್ರು. ಸಭೆ ಬಳಿಕ ಮಾತನಾಡಿದ ಪರಮೇಶ್ವರ್ ರಾಹುಲ್ ಪ್ರವಾಸದ ವಿವರ ನೀಡಿದ್ರು.

ಚಿಕ್ಕಮಗಳೂರಿನಲ್ಲಿ ನಡೆಯೋ ಇಂದಿರಾಗಾಂಧಿ ಜನ್ಮಶತಮಾನೋತ್ಸವ ಕಾರ್ಯಕ್ರಮದ ಬಳಿಕ ರಾಹುಲ್ ಗಾಂಧಿ ಕುಮುಟಾದಲ್ಲಿನ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 21 ರಂದು ನಡೆಯಲಿರೋ ಸಮಾವೇಶದಲ್ಲಿ ಕರಾವಳಿ ಭಾಗದಲ್ಲಿ ಪಕ್ಷ ಸಂಘಟನೆ ಮಾಡೋ ಕಾರ್ಯಕ್ಕೆ ರಾಹುಲ್ ಬಲ ತುಂಬಲಿದ್ದಾರೆ.ಒಟ್ನಲ್ಲಿ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿರೋ ರಾಹುಲ್ ಗಾಂಧಿ ಚುನಾವಣೆಗೆ ಸಿದ್ದವಾಗ್ತಿರೋ ಕರುನಾಡ ಕೈ ಪಾಳಯದ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ತುಂಬಲಿದ್ದಾರೆ.

 Click this button or press Ctrl+G to toggle between Kannada and English